Thursday, April 21, 2016

ವೈದ್ಯರ ಸಾಕ್ಷಾಧಾರ ಬಹುಮುಖ್ಯ


 ವೈದ್ಯರ ಸಾಕ್ಷಾಧಾರ ಬಹುಮುಖ್ಯ 
             
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವಲ್ಲಿ ವೈದ್ಯರ ಸಾಕ್ಷಾಧಾರ ಬಹುಮುಖ್ಯ ಎಂದು ಚೈಲ್ಡ ರೈಟ್ ಟ್ರಸ್ಟನ ಅಧ್ಯಕ್ಷರು ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಹೋರಾಟಗಾರರು ಶ್ರೀ ವಾಸುದೇವ ಶಮರ್ಾ. 
ತರಬೇತಿ ಕಾಯರ್ಾಗಾರವನ್ನು  ಜಿಲ್ಲೆಯ ವೈದ್ಯಾಧಿಕಾರಿಗಳಿಗೆ, ವೈದ್ಯರುಗಳಿಗೆ ಹಾಗೂ ಹಳ್ಳಿಯ ವೈದ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ದಿನಾಂಕ:26-03-2016 ರಂದು ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಸಭಾ ಭವನದಲ್ಲಿ (ಪೊಕ್ಸೊ ಮಕ್ಕಳ ಮೇಲಿನ ಲೈಂಗಿಕ ತಡೆ ಕಾಯ್ದೆಯಲ್ಲಿ) ಬಾಲನ್ಯಾಯ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಗಾರದಲ್ಲಿ ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ಮಾಜಿ ಸದಸ್ಯರು ಹಾಗೂ ಮಕ್ಕಳ ಹಕ್ಕುಗಳ ಟ್ರಸ್ಟ್ನ ಅಧ್ಯಕ್ಷರು ಶ್ರೀ ವಾಸುದೇವ ಶಮರ್ಾರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಮುಖ್ಯ ಅಥಿತಿಗಳಾಗಿ ಉಪಸ್ಥಿತರಿದ್ದರು. ಹಾಗೂ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಶ್ರೀ ಆನಂದ ಲೊಬೋ ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು, ಆಯೋಗದ ಸಮಗ್ರ ಮಾಹಿತಿಯನ್ನು ನೀಡಿದರು. ಹಾಗೂ ವಿಶೇಷವಾಗಿ ಮಕ್ಕಳ ಹಕ್ಕುಗಳ ಬಗ್ಗೆ ಹಾಗೂ ಮಕ್ಕಳಿಗಿರುವ ಕಾನೂನಿನ ಬಗ್ಗೆ ತಿಳಿಯಪಡಿಸಿದರು. ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ|| ದೊಡ್ಡಮನಿ, ಹಾಗೂ ಜಿಲ್ಲೆಯ ವೈದ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರೆಲ್ಲರಿಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಡಾ|| ಬಿ. ಉಷಾ ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಮಕ್ಕಳಿಗೆ ಯಾವ ರೀತಿಯಾದ ರಕ್ಷಣೆಯನ್ನು ನೀಡಬೇಕೆನ್ನುವುದರ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯ ವೈಖರಿಯ ಬಗ್ಗೆ ತಿಳಿಸಿದರು. ಶ್ರೀ ವಾಸುದೇವ ಶಮರ್ಾ ರವರು  ವೈದ್ಯರುಗಳಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಕ್ಕೆ ರಕ್ಷಣಾ ಘಟಕವನ್ನು ಅಭಿನಂದಿಸುತ್ತಾ  ಈ ರೀತಿಯ ಕಾರ್ಯಕ್ರಮಗಳು ಅತ್ಯಂತ ಮುಖ್ಯವಾಗಿವೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಹಾಗೂ ಮಕ್ಕಳನ್ನ ಒಳ್ಳೆಯ ದೃಷ್ಠಿಯಿಂದ ಕಾಣಬೇಕು "ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ" ಆ ನಿಟ್ಟಿನಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದಾಗಿರುವದು ಎಂದು ತಿಳಿಸಿದರು. ಅದೇ ರೀತಿಯಾಗಿ ನಮ್ಮ ಸಮಾಜದ ಹಾಗೂ ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದೆ. ಎಂದು ತಿಳಿಸುತ್ತ ಮಕ್ಕಳಿಗೆ ಸುರಕ್ಷತೆ ಮತ್ತು ಅಸುರಕ್ಷತೆ ಸ್ಪರ್ಶದ ಬಗ್ಗೆ ತಿಳಿಸುತ್ತ ಮಕ್ಕಳು ಚಿಕ್ಕವರಿರುವಾಗಲೇ ಅವರಿಗೆ ಅರಿವನ್ನು ಮೂಡಿಸಬೇಕು. ಮಕ್ಕಳಿಗೆ ಉಚಿತ ಸಹಾಯವಾಣಿ (1098) ಚನ್ನಾಗಿ ಕೆಲಸ ಮಾಡುತ್ತಿರುವ ಬಗ್ಗೆ ತಿಳಿಸಿದರು. ಮಕ್ಕಳ ಮೇಲಿನ ದೌರ್ಜನ್ಯ ದಿನೇ ದಿನೇ ಜಾಸ್ತಿ ಆಗುತ್ತಿದೆ. ಕಾರಣ ಅದನ್ನು ತಡೆಯಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸುತ್ತಾ ಪೊಕ್ಸೊ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಹಾಗೂ ತೆರೆದ ತಂಗುದಾಣದ ಸಿಬ್ಬಂದಿಗಳು ಭಾಗವಹಿಸಿದ್ದರು ಸಾಂಸ್ಥಿಕ ರಕ್ಷಣಾಧಿಕಾರಿ ಶ್ರೀ ನಿಂಗಪ್ಪ ಮಡಿವಾಳರ ನಿರೂಪಿಸಿದರು. ಕೊನೆಯದಾಗಿ ವಂದನಾರ್ಪಣೆಯನ್ನು ಡಾ|| ಹೊನ್ನಕೆರಿ ನಡೆಸಿ ಕೊಟ್ಟರು. 



No comments:

Post a Comment